Tuesday, April 28, 2026
ಸುದ್ದಿ

ಅಯೋಧ್ಯಾ ಪ್ರಕರಣ, ಫೆ. 26ರಿಂದ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು: ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ವಿವಾದಮುಕ್ತವಾದ ಭೂಮಿಯನ್ನು ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಹಿಂದಿರುಗಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಫೆಬ್ರವರಿ 26ರಿಂದ ಅಯೋಧ್ಯಾ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಪಂಚ ಸದಸ್ಯ ಪೀಠದಿಂದ ವಿಚಾರಣೆ ನಡೆಯಲಿದೆ ಜನವರಿ 29ರಂದು ವಿಚಾರಣೆ ನಡೆಸಬೇಕಿತ್ತು. ಆದರೆ ಜಸ್ಟೀಸ್ ಬೊಬ್ಡೆ ಅವರ ಅನುಪಸ್ಥಿತಿಯಿಂದ ವಿಚಾರಣೆಯನ್ನು ಮುಂದೂಡಲಾಗಿತ್ತು. ಈಗ ಜಸ್ಟೀಸ್ ಬೊಬ್ಡೆ ಅವರು ರಜೆ ಅವಧಿ ಮುಗಿಸಿಕೊಂಡು ಹಿಂತಿರುಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಸ್ಟೀಸ್ ಬೊಬ್ಡೆ ಅವರಲ್ಲದೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರು ನ್ಯಾಯಪೀಠದಲ್ಲಿದ್ದಾರೆ. ಫೆಬ್ರವರಿ 26 ಮಂಗಳವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭವಾಗಲಿದೆ.

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ. 2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ