Saturday, March 14, 2026
ಸುದ್ದಿ

ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಇನ್ನಿಲ್ಲ – ಕಹಳೆ ನ್ಯೂಸ್

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ವಿಧಿವಶರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಧನಂಜಯ್ ಕಳೆದ ೬ ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದರು. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತುಂಬಾ ಕೃಶವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಧನಂಜಯ್ ಕುಮಾರ್ ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯ್ ಕುಮಾರ್, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಯಡಿಯೂರಪ್ಪ ಕೆಜಿಪಿ ಆರಂಭಿಸಿದಾಗ ಅವರ ಜೊತೆ ಹೆಜ್ಜೆ ಹಾಕಿದ್ದರು. ೨೦೧೬ ರಲ್ಲಿ ಧನಂಜಯ್ ಕುಮಾರ್ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು

ಜಾಹೀರಾತು
ಜಾಹೀರಾತು

.

ಇನ್ನು ಮಂಗಳೂರು ಕದ್ರಿಕಂಬಳದಲ್ಲಿನ ನಿವಾಸದಲ್ಲಿ ನಾಳೆ ಬೆಳಗ್ಗೆ ೭ ಗಂಟೆಯಿಂದ ೧೦ ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ವೇಣೂರಿಗೆ ಮೃತದೇಹ ಕೊಂಡೊಯ್ದು ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.