Recent Posts

Sunday, September 13, 2026
ರಾಜಕೀಯಸುದ್ದಿ

ಡಿಕೆಶಿಗೆ ಕಡಿವಾಣ ಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸ್ಪರ್ಧಿಸಲಿದ್ದಾರೆ.ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಡಿ.ಕೆ. ಸುರೇಶ್ ಸುಲಭವಾಗಿ ಗೆಲ್ಲಲಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು

ಇನ್ನು ಚುನಾವಣೆ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಯಶಸ್ಸು ಕಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿಯೂ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ, ಡಿ.ಕೆ. ಶಿವಕುಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬಳ್ಳಾರಿ ಕ್ಷೇತ್ರದಲ್ಲಿಯೂ ಡಿ.ಕೆ. ಶಿವಕುಮಾರ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಜೊತೆಗೆ ಸಹೋದರನ ಗೆಲುವಿನ ಜವಾಬ್ದಾರಿ ಕೂಡ ಅವರ ಹೆಗಲೇರಿದೆ. ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿಹಾಕಲು ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಟ್ಟು ಬರದಂತೆ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಸಿ ಪಿ ಯೋಗೇಶ್ವರ್, ರಾಜ್ಯ ರಾಜಕಾರಣದಲ್ಲೇ ತಮಗೆ ಆಸೆ ಇದೆ. ಆದರೆ ಪಕ್ಷ ಸೂಚಿಸಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಗೆಲುವು ಖಚಿತವಾಗಿದೆ. ಪ್ರಧಾನಿ ಮೋದಿ ಅವರೇ ನಮ್ಮೆಲ್ಲರ ಅಭ್ಯರ್ಥಿಯಾಗಿದ್ದಾರೆ. ಡಿಕೆ ಸಹೋದರರ ಅಹಂಕಾರಕ್ಕೆ ಈ ಬಾರಿ ಕ್ಷೇತ್ರದ ಜನ ಪಾಠ ಕಲಿಸಲಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.