
ಮಂಗಳೂರು: ನಗರದ ಬಂದರಿನಿಂದ 30 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆಂದು ತೆರಳಿರುವ ಬೋಟೊಂದು ಮುಳುಗಡೆಯಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಮೀನುಗಾರಿಕೆಗೆಂದು ತೆರಳಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಬೋಟ್‌ನಲ್ಲಿದ್ದ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.










