
ಬೆಂಗಳೂರು : 2018 -19ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಮಾರ್ಚ್ 19ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಜಿಲ್ಲಾ ಉಪನಿರ್ದೇಶಕರ ಅನುಮೋದನೆಯೊಂದಿಗೆ ಸಂಬಂಧಿಸಿದ ಎಲ್ಲಾ ಕಾಲೇಜುಗಳಿಗೆ ಫಲಿತಾಂಶ ನೀಡಲಾಗಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಫಲಿತಾಂಶವನ್ನು ಆನ್ ಲೈನ್‍ನಲ್ಲಿಯೂ ಪಡೆದುಕೊಳ್ಳಬಹುದಾಗಿದೆ. ಅಲ್ಲದೆ, ಉತ್ತೀರ್ಣರಾದ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಏಪ್ರಿಲ್ 28 ರಿಂದ ಮೇ 10 ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಜಗಜೀವನ ದಾಸ್ ಭಂಡಾರಿ ಹೇಳಿದ್ದಾರೆ.









