
ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸುಮಲತಾ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಮಾದೇಗೌಡರು ಬೆಂಬಲ ನಿರಾಕರಿಸಿದ ಬೆನ್ನಲ್ಲೇ ಅವರಿಗೆ ಬಹು ಭಾಷಾ ನಟ ಹಾಗೂ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿರುವ ಪ್ರಕಾಶ್ ರೈ ಅವರು ಬೆಂಬಲ ಸೂಚಿಸಿ ಮಾತನಾಡಿದ್ದಾರೆ.
ಈ ಕುರಿತು ಮಾತನಾಡಿರುವ ಪ್ರಕಾಶ್ ರೈ, ಮಂಡ್ಯದ ಪ್ರಜೆಗಳು ಭಾರತ ಪ್ರಜೆಗಳಾಗಿ ಯೋಚನೆ ಮಾಡಬೇಕು.ಸುಮಲತಾ ಸರಿಯಾದ ರೀತಿಯಲ್ಲಿ ಮಾತನಾಡುತ್ತ ಇದ್ದಾರೆ. ಅನುಭವಸ್ಥರ ರೀತಿಯಲ್ಲಿ ಮಾತನಾಡುತ್ತಿದ್ದಾರೆ.
ಅವರಿಗೆ ರಾಜಕೀಯ ಗೊತ್ತಿಲ್ಲ ಅಂತ ಹೇಳೋಕೆ ಆಗಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಸ್ಪರ್ಧೆ ನಡೆಸುವ ಹಕ್ಕಿಗೆ.ಸುಮಲತಾ ಅವ್ರು ಅಂಬರೀಶ್ ಜೊತೆ ಇದ್ದವರು, ಮಂಡ್ಯದ ಸೊಸೆ. ನನಗೆ ಹಲವು ವರ್ಷಗಳಿಂದ ಪರಿಚಯ ಇದಾರೆ. ಸುಮಲತಾ ಅವರಿಗೆ ಬೆಂಬಲವಾಗಿ ನಾನು ಇದ್ದೀನಿ ಎಂದು ತಿಳಿಸಿದರು.









