
ನೆಕ್ಕಿಲಾಡಿ: ಬಸ್ಸಿನಡಿಗೆ ಬಿದ್ದ ಯುವಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಮಣಿ(33) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಡಿಗೆ ಕಡಬ ಸಮೀಪದ ನೀರಾಜೆ ಎಂಬಲ್ಲಿ ಯುವಕ ಬಿದ್ದಿದ್ದು, ಗಂಭೀರ ಗಾಯಗೊಂಡ ಮಣಿಯನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.









