Monday, April 27, 2026
ರಾಜಕೀಯಸುದ್ದಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಯುವ ನ್ಯಾಯವಾದಿ ತೇಜಸ್ವಿ ಸೂರ್ಯ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಸರತ್ತು ಕೊನೆಗೂ ಅಂತ್ಯ ಕಂಡಿದ್ದು, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯುವ ನ್ಯಾಯವಾದಿ ತೇಜಸ್ವಿ ಸೂರ್ಯ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಕಳೆದ ಕೆಲದಿನಗಳಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಈ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಿದೆ.

ಸೋಮವಾರ ತಡರಾತ್ರಿ ನಡೆದ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಯುವ ನ್ಯಾಯವಾದಿಯಾಗಿರುವ ತೇಜಸ್ವಿ ಸೂರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಈ ಕ್ಷೇತ್ರದಿಂದ ಹಾಲಿ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪರ್ಧಾ ಕಣದಲ್ಲಿದ್ದಾರೆ.