Thursday, September 10, 2026
ಸುದ್ದಿ

ಗಾಯಕ ವಿಜಯ್ ಪ್ರಕಾಶ್‍ಗೆ ಪಿತೃವಿಯೋಗ – ಕಹಳೆ ನ್ಯೂಸ್

ಬೆಂಗಳೂರು: ಜನಪ್ರಿಯ ಗಾಯಕ ವಿಜಯ್ ಪ್ರಕಾಶ್ ತಂದೆ ಎಲ್. ರಾಮಶೇಷ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಜೀ ಕನ್ನಡ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಆಗಮಿಸಿದ್ದ ತಮ್ಮ ತಂದೆ ರಾಮಶೇಷ ಬಗ್ಗೆ ವಿಜಯ್ ಪ್ರಕಾಶ್ ಸಾಕಷ್ಟು ಹೇಳಿಕೊಂಡಿದ್ದರು. ತಮ್ಮ ಪ್ರೀತಿಯ ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ವಿಜಯ್ ಪ್ರಕಾಶ್ ಅವರಿದ್ದಾರೆ. ಆದರೆ ಸದ್ಯಕ್ಕೆ ಅಮೆರಿಕಾದಲ್ಲಿ ಕಾರ್ಯಕ್ರಮ ನೀಡಲು ತೆರಳಿರುವ ವಿಜಯ್ ಪ್ರಕಾಶ್ ತಂದೆಯ ನಿಧನದ ಸುದ್ದಿ ಕೇಳಿ ಕಾರ್ಯಕ್ರಮ ಮೊಟಕುಗೊಳಿಸಿ ಹುಟ್ಟೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ಬಳಿಕವಷ್ಟೇ ಅಂತಿಮ ಕ್ರಿಯೆ ನಡೆಯಲಿದೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು