Friday, March 20, 2026
ಸುದ್ದಿ

ಆಟೋಗೆ ಡಿಕ್ಕಿ ಹೊಡೆದ ಕಾರ್ : ಅಕ್ಕ ತಂಗಿಯರನ್ನ ಬಲಿ ಪಡೆದ ಜವರಾಯ – ಕಹಳೆ ನ್ಯೂಸ್

ಮಂಗಳೂರು : ಕಾರೊಂದು ಅತೀ ವೇಗವಾಗಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾಗೆ ಗುದ್ದಿದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಅಕ್ಕ-ತಂಗಿಯರಿಬ್ಬರೂ ಮೃತಪಟ್ಟ ಘಟನೆ ಸಜಿಪ ಪಡು ಗ್ರಾಮದ ಕಂಚಿಲ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಚಿ ನಿವಾಸಿಗಳಾದ ಜೈನಾಬಾ(45) ಹಾಗೂ ಜೊಹರಾ(55) ಮೃತ ಅಕ್ಕ ತಂಗಿಯರು. ಜೈನಾಬಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ತನ್ನ ತಂಗಿ ಜೊಹರಾರೊಂದಿಗೆ ಚೇಲೂರಿನಲ್ಲಿರುವ ಆಸ್ಪತ್ರೆ ಬಳಿ ತೆರಳುತ್ತಿದ್ದರು.

ಜಾಹೀರಾತು
ಜಾಹೀರಾತು

ಮಂಚಿಯಲ್ಲಿ ರಿಕ್ಷಾ ಬಾಡಿಗೆ ಗೊತ್ತು ಮಾಡಿ ಬರುತ್ತಿದ್ದಾಗ ಸಜಿಪ ಪಡು ಗ್ರಾಮದ ಕಂಚಿಲ ಎಂಬಲ್ಲಿ ಕಾರೊಂದು ಅತೀ ವೇಗವಾಗಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ನಜ್ಜುಗುಜ್ಜಾಗಿದ್ದು, ಅಕ್ಕ-ತಂಗಿಯರಿಬ್ಬರೂ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ರಿಕ್ಷಾ ಚಾಲಕ ಅಶ್ರಫ್ ಹಾಗೂ ಕಾರು ಚಾಲಕ ಮಹಮ್ಮದ್ ಸಿರಾಜ್ ಕೂಡಾ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಇವರ ಸ್ಥಿತಿಯೂ ಗಂಭೀರವಾಗಿದೆ.