
ಸುಡು ಬಿಸಿಲಿಗೆ ಬೆಂದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ವಾಯುಭಾರ ಕುಸಿತದ ಪರಿಣಾಮ ಮಳೆಯಾಗಿದ್ದು, ರಾಜ್ಯದಲ್ಲಿ ಇನ್ನೂ ಎರಡು-ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ತುಂತುರು ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಇನ್ನು ಸೋಮವಾರ ಹಾಸನದ ಅರಕಲಗೂಡು, ಚಿತ್ರದುರ್ಗ ತಾಲೂಕಿನ ಭರಮಸಾಗರ, ತುಮಕೂರಿನ ಹಲವೆಡೆ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ವರುಣ ತಂಪೆರೆದಿದ್ದಾನೆ.















