
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ಕೇರಳದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ತಿರುವನಂತಪುರ ತಲುಪಲಿದ್ದಾರೆ. ಕೇರಳದಲ್ಲಿ ಎ.23ರಂದು ಚುನಾವಣೆ ನಡೆಯಲಿದ್ದು, ರಾಹುಲ್ ಗಾಂಧಿ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹೆಲಿಕಾಪ್ಟರ್ ಮೂಲಕ ತಿರುವನಂತಪುರ ತಲುಪಿರುವ ರಾಹುಲ್ ಗಾಂಧಿ ಅವರು ಪಟ್ಟಣಪುರಂ ಮತ್ತು ಪಟ್ಟಣಂತಿಟ್ಟದಲ್ಲಿ ಇಂದು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇತ್ತೀಚೆಗೆ ನಿಧನರಾಧ ಕೇರಳ ಕಾಂಗ್ರೆಸ್ ಮುಖ್ಯಸ್ಥ ಕೆ.ಎಂ ಮಾಣಿ ಅವರ ಮನೆಗೆ ಇಂದು ಮಧ್ಯಾಹ್ನ 1 ಗಂಟೆಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.









