
ವಾಯುಮಾಲೀನ್ಯ ತಡೆಗಟ್ಟುವ ದೃಷ್ಟಿಯಿಂದ ಹಾಗೂ ಇಂಧನದ ಬಳಕೆಯನ್ನು ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚಾಗಿ ಭಾರತದ ರಸ್ತೆಗಿಳಿಸಲು ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಶ್ರಮ ವಹಿಸುತ್ತಿದೆ. ಮೋದಿಯವರ ಈ ಮಹತ್ತರವಾದ ಯೋಜನೆಗೆ ಆನೆ ಬಲ ಬಂದಾಗಿದೆ. ಕಾರಣ ಅಮೆರಿಕ ಮೂಲದ ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಜಗತ್ತಿನಲ್ಲಿಯೇ ಮುಂಚೂಣಿಯಲ್ಲಿರುವ ಟೆಸ್ಲಾ ಮೋಟಾರ್ಸ್ ಭಾರತಕ್ಕೆ ಕಾಲಿಟ್ಟಿದೆ. ಇಂದು ಟೆಸ್ಲಾ ಸಿಇಒ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳು ಭಾರತ ಮಾರುಕಟ್ಟೆ ಪ್ರವೇಶಿಸುವುದನ್ನು ಖಚಿತಪಡಿಸಿದರು.









