
ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸೃಜನಾ ಪ್ರಥಮ ಟಾಪರ್ ಆಗಿ ಹೊರಹೊಮ್ಮಿದ್ದು, ನಾಗಾಂಜಲಿ ದ್ವಿತೀಯ ಸ್ಥಾನಿಯಾಗಿದ್ದಾರೆ.
ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನಿಯಾಗಿದ್ದರೆ, ರಾಮನಗರ ದ್ವಿತೀಯ ಸ್ಥಾನಿಯಾಗಿದೆ. ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 79.59 ಶೇ. ಫಲಿತಾಂಶ ದಾಖಲಿಸಿದ್ದಾರೆ. ಬಾಲಕರು 68.46 ಶೇ. ಫಲಿತಾಂಶ ದಾಖಲಿಸಿದ್ದಾರೆ. 19 ವಿದ್ಯಾರ್ಥಿಗಳು 623 ಅಂಕ ಗಳಿಸಿದ್ದಾರೆ. 11 ವಿದ್ಯಾರ್ಥಿಗಳು 624 ಅಂಕ ಗಳಿಸಿದ್ದಾರೆ.













