Friday, March 20, 2026
ಸುದ್ದಿ

ಫನಿ ಚಂಡಮಾರುತ; ಮೂರು ರಾಜ್ಯಗಳ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಠಿಯಾಗಿರುವ ಫನಿ ಚಂಡಮಾರುತ ತೀವ್ರ ವೇಗ ಪಡೆದುಕೊಳ್ಳುತ್ತಿದೆ. ಒಡಿಶಾ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಫನಿ ಚಂಡಮಾರುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಬೀಸುವ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಡಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ. 3 ರಂದು ಒಡಿಶಾದ ಕರಾವಳಿ ಭಾಗಕ್ಕೆ ಅಪ್ಪಳಿಸಲಿರುವ ಫನಿ ಚಂಡಮಾರುತವು ಗಂಟೆಗೆ 174ರಿಂದ 185 ಕಿ.ಮೀ. ವೇಗ ಪಡೆದುಕೊಳ್ಳಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಹೆಚ್.ಆರ್. ಬಿಸ್ವಾಸ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು