
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.2 ಭೂಕಂಪನ ತೀವ್ರತೆ ಕಂಡುಬಂದಿದೆ. ಹಿಮಾಚಲ ಪ್ರದೇಶದ ಮಂಡಿ ತಾಲೂಕಿನ ಹಲವೆಡೆ ಲಘು ಭೂಕಂಪನ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಬೆಳಗ್ಗೆ 4:32 ವೇಳೆ ಲಘು ಭೂಕಂಪನ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.















