
ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿನಿಂದ ಅಧಿಕೃತವಾಗಿ ಪ್ರಚಾರದ ಅಖಾಡಕ್ಕೆ ಎಂಟ್ರಿಯಾಗಲಿದ್ದಾರೆ. ಇಂದು ಮೊದಲಿಗೆ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ.
ನಾಳೆ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‍ಮಟ್ಟದ ಕಾರ್ಯಕರ್ತರ ಸಭೆ ಜರುಗಲಿದೆ. ನಾಳೆಯಿಂದ ಎಲ್ಲಾ ಬಿಜೆಪಿ ಶಾಸಕರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಯಡಿಯೂರಪ್ಪ ಸೂಚನೆಗೆ ಮೇರೆಗೆ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಕಡೆ ಬಿಜೆಪಿ ಶಾಸಕರು ಮುಖ ಮಾಡಲಿದ್ದಾರೆ.















