
ಕಲಬುರ್ಗಿ : ನನ್ನ ಮಗಳು ಪಿಯುಸಿಯಲ್ಲಿ ಫೇಲ್ ಆಗಲು ಕಾಂಗ್ರೆಸ್ ನಾಯಕರು ಕಾರಣ ಎಂದು ಕಲಬುರ್ಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಆರೋಪ ಮಾಡಿದ್ದಾರೆ.
ಚಿಂಚೋಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸೇರಲು ನಾನು ಹಣ ಪಡೆದಿದ್ದೇನೆ ಎಂದು ಕಾಂಗ್ರೆಸ್ ನಾಯಕರು ಸಾಕಾಷ್ಟು ಆರೋಪ ಮಾಡಿದ್ದರು. ಈ ಆರೋಪದಿಂದ ನನ್ನ ಕುಟುಂಬ ಮಾನಸಿಕ ಹಿಂಸೆ ಅನುಭವಿಸಿದೆ. ಅಲ್ಲದೇ ನನ್ನ ಮಗಳು ಕೂಡ ಸಾಕಷ್ಟು ಮುಜುಗರ ಅನುಭವಿಸಿದ್ದಾಳೆ. ಇದರ ಪರಿಣಾಮವಾಗಿ ನನ್ನ ಕಿರಿಯ ಮಗಳು ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾಳೆ ಎಂದರು.
ನನ್ನ ಮಗಳು ಪ್ರತಿ ಬಾರಿಯೂ ಉನ್ನತ ಶ್ರೇಣಿಯಲ್ಲಿ ಪರೀಕ್ಷೆಯಲ್ಲಿ ಪಾಸು ಆಗುತ್ತಿದ್ದಳು. ಆದರೆ, ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ಮಾಡಿದ ಆರೋಪದಿಂದಾಗಿ ಕುಟುಂಬಸ್ಥರು ಸಾಕಷ್ಟು ನೋವನ್ನು ಅನುಭವಿಸಿದ್ದಾರೆ.ಇದರಿಂದಾಗಿ ಆಕೆ ಪರೀಕ್ಷೆಯನ್ನು ಉತ್ತಮವಾಗಿ ಬರೆದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿದ್ದಾಗ ಎರಡು ಬಾರಿ ಶಾಸಕರಾಗಿದ್ದ ಜಾಧವ್, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡನೆಗೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.









