Friday, March 13, 2026
ರಾಜಕೀಯಸುದ್ದಿ

ಪ್ರಚಾರ ಕಾರ್ಯದಲ್ಲಿ ಕೈ ನಾಯಕರು ಗೈರು : ಕಾಂಗ್ರೆಸ್ ಹೈಕಮಾಂಡ್ ಫುಲ್ ಗರಂ – ಕಹಳೆ ನ್ಯೂಸ್

ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಿದ್ದತೆ ನಡೆಯುತ್ತಿದ್ದು. ಪ್ರಚಾರ ಕಾರ್ಯವನ್ನ ನಡೆಸುವ ಯೋಚನೆಯನ್ನು ರಾಜಕೀಯ ಪಕ್ಷಗಳು ಮಾಡಿಕೊಂಡಿದೆ. ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಗೈರು ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆಗೆ ಯಾರು ಗೈರಾಗಿದ್ದಾರೆ. ಅವರು ಯಾಕೆ ಪ್ರಚಾರಕ್ಕೆ ಬಂದಿಲ್ಲ ಎಂಬ ಬಗ್ಗೆ ನಮಗೆ ಪಟ್ಟಿ ಕಳಿಸಿಕೊಡಿ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯಾವ ಸಚಿವರು, ಯಾವ ಶಾಸಕರು ಗೈರಾಗಿದ್ದಾರೆ. ಅವರ ಗೈರಿಗೆ ಕಾರಣ ಕೇಳಿ ನಮಗೆ ಮಾಹಿತಿ ರವಾನಿಸಿ ಎಂದು ದಿನೇಶ್ ಗುಂಡೂರಾವ್‍ಗೆ ಕೆ.ಸಿ ವೇಣುಗೋಪಾಲ್ ದೂರವಾಣಿ ಮೂಲಕ ಕರೆ ಮಾಡಿ ವಾನಿರ್ಂಗ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು

ಉಪಚುನಾವಣೆ ಪ್ರಚಾರದಲ್ಲಿ ಬಿಜೆಪಿ, ಕಾಂಗ್ರೆಸ್ ಎರಡು ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ ಇದರಲ್ಲಿ ಕಾಂಗ್ರೆಸ್ ಕೆಲವು ಸಚಿವರು, ಶಾಸಕರು ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸಿದ್ದಾರೆ ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ಈ ವಿಷಯ ತಂದಿದೆ.