Thursday, March 12, 2026
ಸುದ್ದಿ

ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪಡ್ನೂರು ಕೊಡಂಗೆ ನಿವಾಸಿ ಕೃಷ್ಣಪ್ಪ ಪೂಜಾರಿ(68) ಮೃತಪಟ್ಟವರು. ಮಂಡಿನೋವು, ಮೂಲವ್ಯಾದಿ ಮೊದಲಾದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಕುತ್ತಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು