Tuesday, April 28, 2026
ಸುದ್ದಿ

ವಿಶ್ರಾಂತಿ ಪಡೆಯಲು ಇಂದು ಸಂಜೆ ಖಾಸಗಿ ರೆಸಾರ್ಟ್‍ಗೆ ತೆರಳಲಿದ ಎಚ್‍ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಎರಡು ದಿನ ವಿಶ್ರಾಂತಿ ಪಡೆಯಲು ಇಂದು ಸಂಜೆ ಖಾಸಗಿ ರೆಸಾರ್ಟ್‍ಗೆ ತೆರಳಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಮಡಿಕೇರಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ತಮ್ಮ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಸಂಜೆ ರೆಸಾರ್ಟ್‍ಗೆ ತೆರಳುವ ಕುಮಾರಸ್ವಾಮಿ ಕುಟುಂಬ ಭಾನುವಾರ ಸಂಜೆ ಬೆಂಗಳೂರಿಗೆ ವಾಪಸ್ಸಾಗುವ ಕಾರ್ಯಕ್ರಮವಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಮುಖ್ಯಮಂತ್ರಿಗಳ ಯಾವುದೇ ಅಧಿಕೃತ ಕಾರ್ಯಕ್ರಮಗಳು ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಲೋಕಸಭೆ ಚುನಾವಣೆಯ 2ನೇ ಹಂತದ ಬಹಿರಂಗ ಪ್ರಚಾರ ಮುಗಿದ ನಂತರ ಮುಖ್ಯಮಂತ್ರಿ ಉಡುಪಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಐದು ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದಿದ್ದರು. ಈಗ ಮತ್ತೆ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ಮುಂದಾಗಿದ್ದಾರೆ.