
ಕುಂದಾಪುರ : ಪ್ರಕೃತಿ ಚಿಕಿತ್ಸೆಗಾಗಿ ಕಾಪುವಿಗೆ ಆಗಮಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದಂಪತಿ ಇಂದು ಕೋಟದ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಧ್ಯಾಹ್ನ ದೇವಳಕ್ಕೆ ಆಗಮಿಸಿದ ದೇವೇಗೌಡ, ಪತ್ನಿ ಚೆನ್ನಮ್ಮ ಮಧ್ಯಾಹ್ನದ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಈ ವೇಳೆ ಮೊಮ್ಮಗನ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದರು. ಮೇ 16ರವರೆಗೆ ಕಾಪುವಿನಲ್ಲಿ ತಂಗಲಿರುವ ದೇವೇಗೌಡ ದಂಪತಿ, ಉಡುಪಿಯ ಧಾರ್ಮಿಕ ಕ್ಷೇತ್ರಗಳ ದರ್ಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.









