Monday, May 4, 2026
ಸುದ್ದಿ

ಪ್ರಕೃತಿ ವಿಕೋಪವನ್ನು ಎದುರಿಸಲು ಕೊಡಗಿನಲ್ಲಿ ಸಕಲ ಸಿದ್ದತೆ – ಕಹಳೆ ನ್ಯೂಸ್

ಮಡಿಕೇರಿ : ಮಳೆಗಾಲ ಬಂತು ಅಂದ್ರೆ ಕೊಡಗಿನ ಜನತೆ ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಯಾಕಂದ್ರೆ ಎಡೆಬಿಡದೆ ಸುರಿಯೋ ಮಳೆಗೆ ಜನತೆ ಬೆಂಡಾಗಿ ಹೊಗ್ತಾರೆ, ಅಷ್ಟೆ ಅಲ್ಲದೆ ಕಳೆದ ವರ್ಷದ ಪ್ರವಾಹ ಹಿಂಡಿ ಹಿಪ್ಪೆಯಾಗಿಸಿದ್ದು ಸುಳ್ಳಲ್ಲ.. ಹೀಗಾಗಿ ಅದನ್ನು ಎದುರಿಸಿ ಬದುಕೋದನ್ನು ಇಲ್ಲಿನವರು ಕಲಿತುಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಮತ್ತೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪವನ್ನು ಎದುರಿಸಲು ಎಲ್ಲ ರೀತಿಯಲ್ಲೂ ಸನ್ನದ್ಧವಾಗಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಈ ನಡುವೆ ಪೊಲೀಸ್ ಇಲಾಖೆಯಿಂದಲೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿಪತ್ತನ್ನು ಎದುರಿಸುವ ಸಂಬಂಧ ಕಾರ್ಯಾಗಾರ ನಡೆಸಲಾಗುತ್ತಿದ್ದು, ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಸ್ಥಳಾಂತರ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಒಂದು ವಾರಗಳ ಕಾಲ ತರಬೇತಿಯನ್ನು ನೀಡಲಾಗುತ್ತಿದೆ.

ಈ ಕುರಿತಂತೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅನಿರೀಕ್ಷಿತವಾಗಿ ಬರುವ ವಿಪತ್ತನ್ನು ಸಮಯ ಪ್ರಜ್ಞೆಯಿಂದ ಎದುರಿಸಬೇಕು. ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ದುರಂತವನ್ನು ಅರಿತುಕೊಂಡು ಈ ವರ್ಷ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ 15 ಮಂದಿ ಪೊಲೀಸ್ ಸಿಬ್ಬಂದಿಗಳ ಮೂರು ತಂಡವನ್ನು ರಚಿಸಲಾಗಿದೆ. ಹಾಗೆಯೇ ಡಿಎಆರ್‍ನ ಒಂದು ತಂಡ ಸೇರಿದಂತೆ ಒಟ್ಟು 60 ಜನ ಸಿಬ್ಬಂದಿಗಳ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.