Tuesday, May 5, 2026
ಸುದ್ದಿ

ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಹೊಸ ತಿರುವು – ಕಹಳೆ ನ್ಯೂಸ್

ರಾಜ್ಯದ ಗಮನ ಸೆಳೆದಿದ್ದ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ತಿರುವು ಪಡೆದಿದೆ.
ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಭಾರೀ ಹೋರಾಟ ನಡೆದಿತ್ತು. ಅತ್ಯಾಚಾರ ಎಸಗಿ ವಿದ್ಯಾರ್ಥಿನಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ, ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಆಕೆಯನ್ನು ಕೊಲೆ ಮಾಡಿಲ್ಲ ಎಂಬುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಸಿಐಡಿ ಅಧಿಕಾರಿಗಳ ಕೈಸೇರಿದ್ದು, ಕುತ್ತಿಗೆ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿರುವ ಗುರುತು ಇದೆ. ಆದರೆ, ನೇಣಿನ ಕುಣಿಕೆ ಒತ್ತಿರುವುದರಿಂದ ಆ ರೀತಿ ಆಗಿದ್ದು, ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತು ಪತ್ತೆಯಾಗಿಲ್ಲ. ಲೈಂಗಿಕ ದೌರ್ಜನ್ಯದ ಕುರುಹುಗಳು ಕೂಡ ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು 3 ದಿನಗಳ ಬಳಿಕ ದೇಹ ಕಪ್ಪು ಬಣ್ಣಕ್ಕೆ ತಿರುಗಿತ್ತು. ಇದನ್ನು ಕಂಡ ಕೆಲವರು ಯಾರೋ ಕೊಲೆ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿನಿ ಹಾಗೂ ಸುದರ್ಶನ್ ನಡುವೆ ಅನೇಕ ವರ್ಷಗಳಿಂದ ಸ್ನೇಹವಿತ್ತು. ಆದರೆ, ಅದನ್ನು ತಪ್ಪಾಗಿ ಭಾವಿಸಿದ್ದ ಆತ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದು, ವಿದ್ಯಾರ್ಥಿನಿ ಒಪ್ಪದಿದ್ದಾಗ ಗಲಾಟೆ ಮಾಡಿದ್ದ. ಏಪ್ರಿಲ್ 13 ರಂದು ಆಕೆ ಮನೆಯಿಂದ ಹೊರ ಬಂದ ಸಂದರ್ಭದಲ್ಲಿ ಸುದರ್ಶನ್ ಜಗಳವಾಡಿದ್ದ. ಬಳಿಕ ಮನೆಯವರ ಸಂಪರ್ಕಕ್ಕೆ ಸಿಗದ ವಿದ್ಯಾರ್ಥಿನಿ 3 ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಳು. ಮರಣೋತ್ತರ ಪರೀಕ್ಷೆ ವರದಿ ಸಿಐಡಿ ಕೈ ಸೇರಿದ್ದು, ವಿದ್ಯಾರ್ಥಿನಿ ಸಾವಿನ ಕುರಿತಾಗಿ ತನಿಖೆ ಮುಂದುವರೆದಿದೆ ಎಂದು ಹೇಳಲಾಗಿದೆ.