ರಾಹುಲ್ ಗಾಂಧಿ ಮದುವೆ ಆಗಲ್ಲ.. ಸಿದ್ದರಾಮಯ್ಯ ಸಿಎಂ ಆಗಲ್ಲ..!– ಮಾಜಿ ಡಿಸಿಎಂ ಈಶ್ವರಪ್ಪ – ಕಹಳೆ ನ್ಯೂಸ್

ರಾಹುಲ್ ಗಾಂಧಿ ಹೇಗೆ ಈ ಜನ್ಮದಲ್ಲಿ ಮದುವೆ ಆಗಲ್ವೊ? ಹಾಗೆಯೇ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಸಿಎಂ ಆಗಲ್ಲ ಎಂದು ಮಾಜಿ ಡಿಸಿಎಂ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿಎಂ ಆಗೋ ಹುಚ್ಚು ಕನಸಿನಿಂದ ಸಿದ್ದರಾಮಯ್ಯ ಹೊರ ಬರಬೇಕು. ಮೇ 23ರ ನಂತರ ಸಿದ್ದರಾಮಯ್ಯ ಎಲ್ಲಿ ಇರ್ತಾರೆ ನೋಡ್ತಾ ಇರಿ. ಸಿದ್ದರಾಮಯ್ಯಗೆ ವಯಸ್ಸಾಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯ ನಾಲಿಗೆ ಮೇಲೆ ಏನಿದೆಯೋ ನನಗೆ ಗೊತ್ತಿಲ್ಲ. ಬಾಯಿಗೆ ಬಂದ ಹಾಗೆ ಮಾತಾಡ್ತಾರೆ. ಯಡಿಯೂರಪ್ಪಗೆ, ಪ್ರಧಾನಿ ಮೋದಿಗೆ ಅವನು ಇವನು ಅಂತಾರೆ. ಶೋಭಾ ಕರಂದ್ಲಾಜೆಗೆ ಅವಳು ಇವಳು ಅಂತಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತೇನೆ ಎಂಬ ಹುಚ್ಚು ಬಿಡಲಿ. ಈ ಜನ್ಮದಲ್ಲಿ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲ್ಲ ಎಂದು ಈಶ್ವರಪ್ಪ ಹರಿಹಾಯ್ದರು.









