
ಖ್ಯಾತ ಚಿತ್ರ ನಟ ಕಮಲಹಾಸನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಭಾರತದ ಮೊದಲ ಉಗ್ರ ಒಬ್ಬ ಹಿಂದೂ. ಆತನೇ ಮಹಾತ್ಮ ಗಾಂಧಿಯವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು, ತಾವು ಮುಸ್ಲಿಮರನ್ನು ಓಲೈಸಲು ಇದನ್ನು ಹೇಳುತ್ತಿಲ್ಲ. ಮಹಾತ್ಮ ಗಾಂಧಿಯವರ ಪ್ರತಿಮೆ ಬಳಿ ಇದನ್ನು ಹೇಳಿದ್ದೇನೆ ಎಂದಿದ್ದಾರೆ. ಈ ಮೊದಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿಂದೂ ಭಯೋತ್ಪಾದನೆ ಎಂಬ ಪದವನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್ ಎಂಬ ಆರೋಪ ಮಾಡಿದ್ದರ ಮಧ್ಯೆ, ಕಮಲ್ ಅವರ ಈ ಹೇಳಿಕೆ ಮತ್ತೆ ವಿವಾದ ಪಡೆದುಕೊಂಡಿದೆ.









