
ಬಂಟ್ವಾಳ: ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಕೊಪ್ಪಳ, ಕೊದಂಟಿಯಡ್ಕ ಧೂಮಾವತಿ ಬಂಟ ಸಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಪಳನೀರು ಅನಂತ ಭಟ್ ತಂತ್ರಿಯವರ ನೇತ್ರತ್ವದಲ್ಲಿ ವೃಷಭ ಲಗ್ನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು , ಆರ್.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ!ಪ್ರಭಾಕರ ಭಟ್ ಹಾಗೂ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ಬಳಿಕ ನಡೆದಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಜಗನ್ನಾಥ ಬಂಗೇರ ವಹಿಸಿದ್ದರು.









