
ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಸೈಡ್ ಕೊಡುವ ಬರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ಸಂದರ್ಭ ದ್ವಿಚಕ್ರವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ದ್ವಿಚಕ್ರವಾಹನದ ಹಿಂಬದಿಯಲ್ಲಿ ಬರುತ್ತಿದ್ದ ಕಾರಿನಲ್ಲಿದ್ದ ಮಂಗಳೂರು ಮೂಲದ ತಂಡ ಈ ಕೃತ್ಯವನ್ನು ಎಸಗಿದೆ. ಅಪಘಾತವೆಸಗಿದ ಕಾರನ್ನು ರಾಡ್ ಹಾಗೂ ಇನ್ನಿತರ ವಸ್ತುಗಳನ್ನು ಬಳಸಿ ಪುಡಿಪುಡಿ ಮಾಡಲಾಗಿದೆ. ಕಾರನ್ನು ಪುಡಿ ಮಾಡುವ ಸಂದರ್ಭದಲ್ಲಿ ಪ್ರಶ್ನೆ ಮಾಡಿದ್ದಕ್ಕೆ ಸ್ಥಳೀಯ ಯುವಕರ ಹಾಗೂ ಮಂಗಳೂರು ಮೂಲದ ಯುವಕರ ಮಧ್ಯೆ ಗಲಾಟೆ ಗಳು ನಡೆದು ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗುತ್ತಿದೆ.ಈ ಸಂದರ್ಭದಲ್ಲಿ ಒರ್ವನಿಗೆ ಗಾಯಗೊಂಡು ಪುತ್ತೂರು ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಕಾರು ಪುಡಿ ಮಾಡಿದ ಯುವಕರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿದ್ದಾರೆ.









