
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಇನ್ನೂ ಒಬ್ಬ ಯೋಧರು ಗಾಯಗೊಂಡಿದ್ದಾರೆ. ಇನ್ನೂ ಉಗ್ರರು ಅಡಗಿಕೊಂಡಿದ್ದು, ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.









