
ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 87ನೇ ವರ್ಷದ ಸಂಭ್ರಮದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಗಳು, ನಾನು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.










