Wednesday, April 29, 2026
ಸುದ್ದಿ

ನಟಿ ರಾಧಿಕಾ ಕುಮಾರಸ್ವಾಮಿ ತಂದೆ ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ರಾಧಿಕಾ ತಂದೆ ದೇವರಾಜ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ಹಬ್ಬದ ಸಂಭ್ರಮದಲ್ಲಿದ್ದ ಅವರಿಗೆ ಸಂಭ್ರಮದ ಬಳಿಕ ಕಫ ಹೆಚ್ಚಾಗಿತ್ತು. ಇಂದು ದೇವರಾಜ್ ಅವರು ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನಲ್ಲಿ ದೇವರಾಜ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು