Thursday, March 12, 2026
ಸುದ್ದಿ

ಉಪ್ಪಿನಂಗಡಿಯಲ್ಲಿ ಮಾರುತಿ ಓಮ್ನಿ ಪಲ್ಟಿ – ಕಹಳೆ ನ್ಯೂಸ್

ಕಡಬ : ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಲ್ಲಿ ಸಂಭವಿಸಿದೆ.

ಕಡಬದ ಬಸ್ ನಿಲ್ದಾಣದ ಬಳಿ ವ್ಯಾಪಾರ ನಡೆಸುತ್ತಿರುವ ಅಬ್ಬಾಸ್ ಎಂಬವರು ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದಾಗ ಕಳಾರ ಸಮೀಪ ಬೇರೊಂದು ವಾಹನವು ಇವರ ಓಮ್ನಿಯನ್ನು ಓವರ್ ಟೇಕ್ ಮಾಡಿದ್ದು, ಈ ಸಂದರ್ಭದಲ್ಲಿ ರಸ್ತೆ ಬಿಟ್ಟು ಕೊಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಅಬ್ಬಾಸ್ ರವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು