Tuesday, April 28, 2026
ರಾಜಕೀಯಸುದ್ದಿ

ಎನ್​​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ: ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್​​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೆ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಬಿಜೆಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮೇಳೈಸಿದೆ. ನಗರದ ಬಿಜೆಪಿ ಕಚೇರಿ ಬಳಿ ಪ್ರಧಾನಿ ಮೋದಿ ಹೆಸರನ್ನ ಕೂಗಿ ಬಿಜೆಪಿಗೆ ಜೈಕಾರ ಹಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು