
ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲೂ ಎನ್ಡಿಎ ಮೈತ್ರಿಕೂಟ ವಿಜಯದತ್ತ ದಾಪುಗಾಲು ಇಡುತ್ತಿದೆ. ಸಂಜೆ ವೇಳೆಗೆ ಫಲಿತಾಂಶ ಏನು ಅನ್ನೋದು ಸ್ಪಷ್ಟವಾಗಿ ತಿಳಿಯಲಿದೆ. ಎನ್ಡಿಎ ಭಾರೀ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ದೆಹಲಿಯ ಮುಖ್ಯ ಕಚೇರಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ನಡೆಯಲಿದ್ದು, ಅದಾದ ನಂತರ 5.30ರ ಸುಮಾರಿಗೆ ಬಿಜೆಪಿ ಕಚೇರಿಯಲ್ಲಿ ಮೋದಿ ಕಾರ್ಯಕರ್ಯರನ್ನ ಭೇಟಿಯಾಗಲಿದ್ದಾರೆ.









