
ನವದೆಹಲಿ : 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ನರೇಂಧ್ರ ಮೋದಿ ನೇತೃತ್ವದ ಎನ್ ಡಿ ಎ ದೇಶದ ಚುಕ್ಕಾಣಿ ಹಿಡಿಯಲಿದೆ. ಹೌದು, ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇಂದು ಎನ್‍ಡಿಎ ಪಕ್ಷದ ಸಂಸದೀಯ ಕಾರ್ಯಕಾರಣಿ ಸಭೆ ಸೆಂಟ್ರಲ್ ಹಾಲ್ ನಲ್ಲಿ ನಡೆದಿದ್ದು, ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರು, ಮುಖಂಡರು ಭಾಗವಹಿಸಿದ್ದು, ನರೇಂದ್ರ ಮೋದಿಯವರನ್ನು ಎನ್ ಡಿ ಎ ಸಂಸದೀಯ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಇನ್ನೂ ಮೇ ತಿಂಗಳ 30ರಂದು ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಕೆಲ ಸಂಸದರು ಕೇಂದ್ರ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.









