Friday, March 20, 2026
ಸುದ್ದಿ

ತ್ರಿಪುರದಲ್ಲಿ ತೀವ್ರ ಪ್ರವಾಹ: ಅಪಾಯದಲ್ಲಿದ್ದ 700 ಜನರ ರಕ್ಷಣೆ – ಕಹಳೆ ನ್ಯೂಸ್

ಈಶಾನ್ಯ ರಾಜ್ಯ ತ್ರಿಪುರದಲ್ಲಿ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ತ್ರಿಪುರ, ಉನೈಕೋಟಿ, ದಲೈ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಅಪಾಯದಲ್ಲಿದ್ದ 700 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ತ್ರಿಪುರ ಸರ್ಕಾರ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಗ್ನಿಶಾಮಖ ದಳ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಮುಳುಗಡೆ ಪ್ರದೇಶದಲ್ಲಿರುವ ಜನರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ. 500ಕ್ಕೂ ಹೆಚ್ಚು ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದ್ದು ಆಹಾರ ಬಟ್ಟೆಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಮುಂದಿನ 24 ಗಂಟೆಗಳಲ್ಲಿ ಮಳೆ ಮುಂದುವರೆಯುವುದರಿಂದ ಪ್ರವಾಹದ ತೀವ್ರತೆ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.