
ಆಂಧ್ರಪ್ರದೇಶದಲ್ಲಿ ಅಭೂತಪೂರ್ವ ಜಯ ದಾಖಲಿಸಿ, ಅಧಿಕಾರ ಸ್ಥಾಪನೆಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಮುಂದಾಗಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 151 ಸ್ಥಾನಗಳನ್ನು ಜಗನ್ ಮೋಹನ್ ರೆಡ್ಡಿ ಅವರ ಪಕ್ಷವು ಗೆದ್ದುಕೊಂಡಿದೆ. ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ಅವರ ತೆಲುಗುದೇಶಂ ಪಕ್ಷವು ಕೇವಲ 23 ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ವಿಧಾನಸಭೆ ಅಲ್ಲದೆ ಲೋಕಸಭೆ ಚುನಾವಣೆಯಲ್ಲೂ ವೈಎಸ್‌ಆರ್ ಕಾಂಗ್ರೆಸ್ ಉತ್ತಮ ಫಲಿತಾಂಶ ಹೊರಹಾಕಿದೆ, 25 ರಲ್ಲಿ 22 ಸ್ಥಾನಗಳನ್ನು ಗೆದ್ದುಕೊಂಡಿದೆ. ಟಿಡಿಪಿ ಕೇವಲ 3 ಸ್ಥಾನ ಗಳಿಸಿದೆ.
ಇದೀಗ ಎನ್‍ಡಿಎ ಯಿಂದ ಪ್ರಧಾನಿಯಾಗಿ ನಿಯೋಜನೆಗೊಂಡಿರುವ ನರೇಂದ್ರ ಮೋದಿ ಅವರನ್ನು ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿಯಾಗಿರುವ ಜಗನ್ ಮೋಹನ್ ರೆಡ್ಡಿ ಅವರು ಇಂದು ಭೇಟಿ ಮಾಡಿದರು. ನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದರು. ಮೇ 30ರಂದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು















