
ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ನಾಯಕರನ್ನು ಭೇಟಿಯಾದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಸುಮಲತಾ ಅಂಬರೀಶ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಮೊದಲು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಯಡಿಯೂರಪ್ಪ, ಆರ್.ಅಶೋಕ ಅವರ ಜೊತೆ ತೆರಳಿದರು. 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು 1,25,876 ಮತಗಳಿಂದ ಸೋಲಿಸಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.















