Thursday, March 19, 2026
ಸುದ್ದಿ

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲಹಂಕದ ಕೋಗಿಲು ಕ್ರಾಸ್ ಬಳಿ ತಡರಾತ್ರಿ 12:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೀಪಾಂಕ ಡೇ(46), ಸ್ವಾಗತಾ ಚೌಧರಿ(42), ಸುಜಯ್(45) ಜಯತಿ(65) ಹಾಗೂ ದೃವ ಡೇ(14) ಮೃತ ದುರ್ದೈವಿಗಳು. ಇನ್ನು ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಬಂಗಾಳ ಮೂಲದ ಈ ಕುಟುಂಬ ಚೆನ್ನೈನಿಂದ ಬೆಂಗಳೂರಿನ ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಘಟನೆ ಸಂಬಂಧ ಯಲಹಂಕ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು