
ಮೇ 27ಕ್ಕೆ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡ ಕಾರಣ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಸಿಐಡಿ ವಿಚಾರಣೆ ಪೂರ್ಣಗೊಂಡ ಕಾರಣ ಮೇ 2 ರಂದು ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿದ್ದರು ಸಿಐಡಿ ಅಧಿಕಾರಿಗಳು. ಅದಾದ ನಂತರ ಎರಡನೆ ಬಾರಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.
ರಾಯಚೂರಿನ 3 ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಅವಿನಾಶ ಗಾಳಿ ಅವರು ಆದೇಶ ನೀಡಿದರು.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆಲವ ತಿಂಗಳುಗಳ ಹಿಂದೆ ಶವವಾಗಿ ಪತ್ತೆಯಾಗಿದ್ದು ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ವಿದ್ಯಾರ್ಥಿನಿ ಅಸಹಜ ಸಾವನ್ನು ಖಂಡಿಸಿ, ಬೆಂಗಳೂರು, ಹುಬ್ಬಳ್ಳಿ, ರಾಯಚೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.














