
ನರೇಂದ್ರ ಮೋದಿ ಇಂದು 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ಮೋದಿಯವರೊಂದಿಗೆ 65 ರಿಂದ 70 ಮಂತ್ರಿಗಳು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟ ಬಿಜೆಪಿ ಕಾರ್ಯಕರ್ತರ ಕುಟುಂಬದವರನ್ನೂ ಕೂಡ ಪ್ರಮಾಣವಚನ ಸಮಾರಂಭಕ್ಕೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬದವರನ್ನು ಈ ಕಾರ್ಯಕ್ರಮಕ್ಕೆ ಕರೆಯಲಾಗಿದೆ.
ಇನ್ನು ಈ ಪ್ರಮಾಣವಚನ ಸಮಾರಂಭಕ್ಕೆ ರಾಷ್ಟ್ರದ ಎಲ್ಲಾ ನಾಯಕರು ತಮ್ಮ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿದ್ದಾರೆ, ಅಂತೆಯೇ ಮಾರಿಷಸ್ ಪ್ರಧಾನ ಮಂತ್ರಿ ಪ್ರವೀಣ್ ಕುಮಾರ್ ಜಗನ್ನಾಥ್ ದೆಹಲಿಗೆ ಇಗಾಗಲೇ ಆಗಮಿಸಿದ್ದಾರೆ..














