
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ ದಂಡಾವತಿ ಅವರು ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಿನ್ನೆ ಸಂಜೆ ಆದೇಶವನ್ನು ಹೊರಡಿಸಿದೆ. ದಂಡಾವತಿ ಅವರಿಗೆ ಪ್ರಜಾವಾಣಿ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಇಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೂರು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ.














