Saturday, March 14, 2026
ರಾಜಕೀಯಸುದ್ದಿ

48 ವರ್ಷದ ಬಳಿಕ ಹಣಕಾಸು ಖಾತೆ ನಿರ್ವಹಿಸಲಿರುವ ಮಹಿಳೆ – ಕಹಳೆ ನ್ಯೂಸ್

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದು ಮಹತ್ವದ ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ್ದಾರೆ. ಇದರಿಂದಾಗಿ 48 ವರ್ಷಗಳ ಬಳಿಕ ಮಹಿಳೆಯೊಬ್ಬರು ಹಣಕಾಸು ಸಚಿವೆಯಾದಂತಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1969 ರಿಂದ ಜೂನ್ 1970 ರ ವರೆಗೆ ಹಣಕಾಸು ಖಾತೆಯನ್ನು ನಿರ್ವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಲಾ ಸೀತಾರಾಮನ್ ಅವರಿಗೆ ಮಹತ್ವದ ರಕ್ಷಣಾ ಖಾತೆಯನ್ನು ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಖಾತೆಯನ್ನು ನಿರ್ಮಲಾ ಸೀತಾರಾಮನ್ ಅವರು ಸಮರ್ಥವಾಗಿ ನಿರ್ವಹಿಸುವ ಮೂಲಕ ಈಗ ಹಣಕಾಸು ಖಾತೆಯನ್ನು ಪಡೆದಿದ್ದಾರೆ. 59ರ ಹರೆಯದ ತಮಿಳುನಾಡು ಮೂಲದ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು