ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿದ ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಖೆ ಪಾಟೀಲ್ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದ್ದು, ಇತರ ಕೆಲವು ಕಾಂಗ್ರೆಸ್ ಶಾಸಕರೂ ಅವರನ್ನು ಹಿಂಬಾಲಿಸುವ ಸಾಧ್ಯತೆ ದಟ್ಟವಾಗಿದೆ.
ಬಿಜೆಪಿ ಸೇರಲಿರುವ ವಿಖೆ ಪಾಟೀಲ್ ಅವರಿಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಾಂಗ್ರೆಸ್ ನಾಯಕ ವಿಖೆ ಪಾಟೀಲ್ ಪಾಟೀಲ್, ವಿಧಾನ ಸಭೆ ಸ್ಪೀಕರ್ ಹರಿಭಾವು ಬಾಗಡೆ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.









