
ಭಟ್ಕಳ: ಭಟ್ಕಳದ ಜಾಲಿ ಗ್ರಾಮ ಪಂಚಾಯತಿಯು, ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಸೇರ್ಪಡೆಯಾಗಿದೆ. ಸರ್ಕಾರ ಈಗಾಗಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ ಮಂಜೂರು ಮಾಡಲಾಗಿದೆ. ಆದರೆ ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳದ ಕೊರತೆ ಇರುವುದರಿಂದ ಅಧಿಕಾರಿಗಳೊಂದಿಗೆ ಚರ್ಚಿಸಿ ನೂತನ ಕಟ್ಟಡಕ್ಕೆ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ ಸರ್ಕಾರದ ಮಟ್ಟದಲ್ಲಿ ಜಾಗವನ್ನು ಮಂಜೂರು ಮಾಡಲು ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಈಗ ನೂತನ ಕಟ್ಟಡಕ್ಕೆ ಜಾಗ ಮಂಜೂರಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ನೂತನ ಕಟ್ಟಡದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಭಟ್ಕಳ ಶಾಸಕರು ಶ್ರೀ ಸುನಿಲ್ ನಾಯ್ಕ್ ತಿಳಿಸಿದರು.










