Thursday, March 19, 2026
ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದ ಆದಾಯದಲ್ಲಿ ಇಳಿಕೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದ ಆದಾಯದಲ್ಲಿ ಇಳಿಕೆ ಕಂಡುಬಂದಿದೆ. ಆದಾಯ ಕಡಿಮೆಯಾದರೂ ಶ್ರೀಮಂತ ದೇವಾಲಯ ಎಂಬ ಪಟ್ಟಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ.

2018-19 ನೇ ಸಾಲಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯ 92,09,13,824 ರೂ.ಗಳಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ದೇವಾಲಯದ ಆದಾಯ 3.83 ಕೋಟಿ ಕುಸಿತವಾಗಿದೆ. ಆದರೂ ರಾಜ್ಯದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿನಿತ್ಯ ಸಾವಿರಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಾರೆ. ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಪೂಜೆಗಳನ್ನು ಮಾಡಿಸುತ್ತಾರೆ. ವರ್ಷದಿಂದ ವರ್ಷಕ್ಕೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ.

ಜಾಹೀರಾತು
ಜಾಹೀರಾತು

2007-08ರಲ್ಲಿ 24.44 ಕೋಟಿ ಆದಾಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದಿತ್ತು. ಆಗ ದೇವಾಲಯ ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಗೆ ಸೇರಿತು. ವರ್ಷದಿಂದ ವರ್ಷಕ್ಕೆ ದೇವಾಲಯದ ಆದಾಯ ಹೆಚ್ಚಾಗುತ್ತಲೇ ಇದೆ. ಆದಾಯದ ವಿಚಾರದಲ್ಲಿ ರಾಜ್ಯದ ನಂ.1 ದೇವಾಲಯವಾಗಿದೆ.