Tuesday, April 28, 2026
ಸುದ್ದಿ

ಬಿಎಂಟಿಸಿ ಪಿಂಕ್ ಸಾರಥಿಗೆ ಸಿಎಂ ಚಾಲನೆ – ಕಹಳೆ ನ್ಯೂಸ್

ಮಹಿಳೆಯರು ಹಾಗೂ ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವತಿಯಿಂದ ನಿರ್ಭಯ ಯೋಜನೆ ಅಡಿಯಲ್ಲಿ ಪಿಂಕ್ ಸಾರಥಿ ಗಸ್ತು ವಾಹನ ಸಂಚಾರ ಆರಂಭಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 4.30 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿರುವ 25 ಪಿಂಕ್ ಸಾರಥಿ ವಾಹನಗಳಿಗೆ ಮುಖ್ಯಮಂತ್ರಿ ಹಸಿರು ನಿಶಾನೆ ತೋರಿದರು. ಬಿಎಂಟಿಸಿ ವ್ಯಾಪ್ತಿ ಯಲ್ಲಿ ಸಂಚರಿಸುವ ಬಸ್, ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಲು ಪಿಂಕ್ ಸಾರಥಿ ವಾಹನಗಳು ನಿರಂತರ ಕಾರ್ಯಾಚರಣೆ ನಡೆಸುತ್ತವೆ. ಈ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ದಿನದ 24 ಗಂಟೆಯೂ ಈ ವಾಹನಗಳು ಕಾರ್ಯಾಚರಣೆ ನಡೆಸುತ್ತಿರುತ್ತವೆ.

ನಿರ್ಭಯ ಯೋಜನೆ ಅಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 56.07 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಈ ಅನುದಾನದಡಿ ಮಹಿಳೆಯರಿಗೆ ಲಘು ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿ ನೀಡಿ ಪರವಾನಗಿ ಕೊಡಿಸುವುದು. 1 ಸಾವಿರ ಬಸ್‍ಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವುದು. ಸಂಸ್ಥೆಯ 11 ಸಾವಿರ ಸಿಬ್ಬಂದಿಗೆ ಲಿಂಗ ಸಂವೇದನಾ ತರಬೇತಿ ನೀಡುವುದು. ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.