
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು, ಜೂನ್ 11 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ವಾರಂಬಳ್ಳಿ ಪಂಚಾಯತ್ ನಲ್ಲಿ ಹಮ್ಮಿಕೊಂಡಿರುವ ಸ್ವಚ್ಛಮೇವ ಜಯತೇ ಮತ್ತು ಜಲಾಮೃತ ಆಂದೋಲನ -2019 ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಹೆಬ್ರಿಯಲ್ಲಿ ನಡೆಯುವ ಟ್ರೀ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಕಚೇರಿ ತಿಳಿಸಿದೆ.









