Tuesday, April 28, 2026
ರಾಜಕೀಯಸುದ್ದಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ-ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಇಲ್ಲ. ಮತದಾರರು ನಮಗೆ 105 ಸ್ಥಾನ ಕೊಟ್ಟಿರುವುದು ಐದು ವರ್ಷ ಆಡಳಿತ ನಡೆಸಲು ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ.

ಈ ಮೂಲಕ, ಬಿಜೆಪಿಗೆ ಹೋದರೆ ಹೊಸ ಸರ್ಕಾರ ರಚನೆಯಾಗುವ ಬದಲಿಗೆ ವಿಧಾನಸಭೆ ವಿಸರ್ಜನೆಯಾಗಿ ಮತ್ತೆ ಚುನಾವಣೆ ಎದುರಾಗಬಹುದು ಎಂಬ ಆತಂಕದಲ್ಲಿ ಇದ್ದವರಿಗೆ ಸಮ್ಮಿಶ್ರ ಸರ್ಕಾರ ಪತನವಾದರೆ ನಾವು ಸರ್ಕಾರ ರಚಿಸುತ್ತೇವೆ ಎಂಬ ಅಭಯ ನೀಡಿದ್ದಾರೆ ಎಂದು ವಿಶ್ಲೇಷಣೆಗಳು ಕೇಳಿಬರುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿಖಿಲ್ ಕುಮಾರಸ್ವಾಮಿಯವರು ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾಗಬಹುದು, ಸಜ್ಜಾಗಿರಿ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಹುಬ್ಬಳ್ಳಿಯಲ್ಲಿ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಸಲು ಬಿಡುವುದಿಲ್ಲ, ನಾವು 105 ಸ್ಥಾನ ಗೆದ್ದಿದ್ದೇವೆ. ಜನರು ಐದು ವರ್ಷ ಆಡಳಿತ ನಡೆಸಲು ಶಾಸಕರನ್ನು ಆರಿಸಿ ಕಳುಹಿಸಿದ್ದಾರೆ. ಚುನಾವಣೆ ಏನಿದ್ದರೂ ಐದು ವರ್ಷದ ನಂತರವೇ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಈ ಹೇಳಿಕೆ ಕಾಂಗ್ರೆಸ್‍ನ ಅತೃಪ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಿಂದ ತಮಗೆ ಅವಕಾಶ ಸಿಗಬಹುದು ಎಂದು ಕಾದುಕುಳಿತಿದ್ದವರು ಸದ್ಯಕ್ಕೆ ವಿಸ್ತರಣೆ ಅಥವಾ ಪುನರ್ ರಚನೆ ಅನುಮಾನ ಎಂಬ ಸ್ಥಿತಿ ನಿರ್ಮಾಣವಾಗಿರುವುದರಿಂದ ಮತ್ತೆ ಬಿಜೆಪಿಯ ಕಡೆ ಮನಸ್ಸು ಹರಿಸಿದ್ದಾರೆ ಎಂದು ಹೇಳಲಾಗಿದೆ.