
ಕೋಲ್ಕತಾದ ಹೌರಾದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಹೌರಾದ ಜಗನ್ನಾಥ ಘಾಟ್‍ನಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.








